...

ಇದೀಗ ಅಧಿಕೃತ

ಕರ್ನಾಟಕದ 7 ಅದ್ಭುತಗಳು ಇವು

ಕರ್ನಾಟಕದ 7 ಅದ್ಭುತಗಳು ಎಂದರೆ ಕೇವಲ ಸುಂದರವಾಗಿರುವುದಷ್ಟೇ ಅಲ್ಲ. ಇಡೀ ಕರ್ನಾಟಕದ ಎಲ್ಲ ವೈವಿಧ್ಯಗಳ ಪ್ರಾತಿನಿಧಿಕ ಹೆಗ್ಗುರುತುಗಳು ಇವು. ನೆಲ, ಜಲ, ಕಾಡು, ಕಡಲು, ವಾಸ್ತು, ವಿಜ್ಞಾನ, ಶಿಲ್ಪ, ಕಲೆ, ಇತಿಹಾಸ, ಪರಂಪರೆ, ಕನ್ನಡಿಗರ ತತ್ವ ಸಿದ್ಧಾಂತಗಳೆಲ್ಲವನ್ನೂ ಪ್ರತಿನಿಧಿಸುವಂಥ ಸಮಗ್ರ ಕರ್ನಾಟಕದ ಪ್ರತೀಕಗಳಾಗಿರಬೇಕು ಅವು. ಅಂಥ ನೂರಾರು ಅದ್ಭುತಗಳಿರುವ ಕನ್ನಡನಾಡು ನಮ್ಮದು. ಇವುಗಳಲ್ಲಿ ಪ್ರಾತಿನಿಧಿಕ ಎನ್ನುವಂಥ ಅದ್ಭುತಗಳನ್ನು 7 ವರ್ಗಗಳಾಗಿ ವಿಂಗಡಿಸಿ ಅವುಗಳಲ್ಲಿ 7 ಹೆಗ್ಗುರುತುಗಳನ್ನು ಇದೀಗ ವೈಜ್ಞಾನಿಕ ವಿಧಾನದಿಂದ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಮೂಲೆ ಮೂಲೆಯ ಜನರಿಂದ 5000 ಕ್ಕೂ ಹೆಚ್ಚು ನಾಮನಿರ್ದೇಶನ, 82 ಲಕ್ಷಕ್ಕೂ ಅಧಿಕ ಜನಮತ ಚಲಾವಣೆ, 1 ವರ್ಷದ ಸ್ಥಳ ಸಮೀಕ್ಷೆ, ಜಾಗತಿಕ ಪ್ರವಾಸೋದ್ಯಮ ಹಾಗೂ ಇತಿಹಾಸ ತಜ್ಞರಿರುವ 7 ತೀರ್ಪುಗಾರರ ಸಮಿತಿಯ ವಿಚಾರ ಮಂಥನ... ಇವೆಲ್ಲವುಗಳ ನಂತರ ಕರ್ನಾಟಕದ 7 ಅದ್ಭುತಗಳ ಆಯ್ಕೆ... ಇಗೋ ಈಗ ನಿಮ್ಮ ಮುಂದಿವೆ.

ಹಿರೇಬೆಣಕಲ್ ಶಿಲಾ ಸಮಾಧಿಗಳು - ಬೃಹತ್ ಶಿಲಾಯುಗದ ಅದ್ಭುತ
Like the world famous Stone Henges of England, this is 3000 years old pre-historic megalithic settlement in Karnataka.

ಬಹುತೇಕ ಕನ್ನಡಿಗರಿಗೇ ಅಪರಿಚಿತವಾದ ಕರ್ನಾಟಕದ ಅದ್ಭುತ ಇದು. ಸುಮಾರು 3000-4000 ವರ್ಷಗಳಷ್ಟು ಹಳೆಯ ಇತಿಹಾಸ ಇರುವ ತಾಣ. ಕೊಪ್ಪಳ ಜಿಲ್ಲೆ ಗಂಗಾವತಿಯಿಂದ ಸುಮಾರು 10 ಕಿ.ಮೀ. ದೂರದ ಹಿರೇಬೆಣಕಲ್ ಗ್ರಾಮದ ಮೋರ್ಯಾರ ಗುಡ್ಡದಲ್ಲಿ ಆದಿಮಾನವ ನಿರ್ಮಿತ ಬೃಹತ್ ಶಿಲಾಯುಗದ ನೂರಾರು ಶಿಲಾಸಮಾಧಿಗಳು ಹಾಗೂ ಆದಿಮಾನವ ರಚಿತ ಗುಹಾಚಿತ್ರಗಳು ಇವೆ. ಲಂಡನ್ನಿನ ಸ್ಟೋನ್ ಹೆಂಜಸ್, ಈಜಿಪ್ಟಿನ ಪಿರಮಿಡ್ಡುಗಳು, ಬಹರೈನಿನ ದಿಲ್ಮನ್ ಸಮಾಧಿ ದಿಬ್ಬಗಳಂತೆ - ಸಾವಿನ ಗೌರವ ಸೂಚಕಗಳು - ಈ ಶಿಲಾಸಮಾಧಿ ಡೋಲ್ಮನ್ ಗಳು. ವಿಶ್ವದ ಹಲವೆಡೆ ಇಂಥ ಡೋಲ್ಮನ್ ಗಳು ಇದ್ದು, ಕೊರಿಯಾ ಒಂದರಲ್ಲೇ ವಿಶ್ವದ ಶೇ.40ರಷ್ಟು ಡೋಲ್ಮನ್ ಗಳು ಪತ್ತೆಯಾಗಿವೆ. ಭಾರತದಲ್ಲಿ ಹಲವೆಡೆ ಈ ಶಿಲಾಸಮಾಧಿಗಳು ಪತ್ತೆಯಾಗಿವೆಯಾದರೂ, ಹಿರೇಬೆಣಕಲ್ ಮೋರ್ಯಾರ ಗುಡ್ಡ ಇಡೀ ದಕ್ಷಿಣ ಭಾರತದಲ್ಲೇ ಅತಿದೊಡ್ಡ ಮೆಗಾಲಿಥಿಕ್ ತಾಣವಾಗಿದೆ. ಒಂದು ಅಡಿಯ ಶಿಲಾಸಮಾಧಿಯಿಂದ ಹಿಡಿದು 10 ಅಡಿ ಶಿಲಾಚಪ್ಪಡಿಯ ಸಮಾಧಿಗಳು ಮೂರು-ನಾಲ್ಕು ಸಾವಿರ ವರ್ಷಗಳ ಪ್ರಾಕೃತಿಕ ಹೊಡೆತಗಳನ್ನು ತಾಳಿಯೂ ಇನ್ನೂ ಗಟ್ಟಿಯಾಗಿ ನಿಂತಿರುವುದು ನಿಜಕ್ಕೂ ಅದ್ಭುತ. ಕರ್ನಾಟಕದಲ್ಲಿ ಇರುವ ಇಂಥ ಅನೇಕ ಪ್ರಾಗೈತಿಹಾಸಿಕ ತಾಣಗಳ ಪ್ರಾತಿನಿಧಿಕ ಅದ್ಭುತವೇ ಹಿರೇಬೆಣಕಲ್ ಮೋರ್ಯಾರ ಗುಡ್ಡದ ಶಿಲಾ ಸಮಾಧಿಗಳು.

ಹಿರೇ ಬೆಣಕಲ್ ಶಿಲಾಸಮಾಧಿಗಳು: 3000 ವರ್ಷದಷ್ಟು ಹಳೆಯದಾದ ಮೆಗಾಲಿಥಿಕ್ ಕಾಲದ ಮಾನವ ಸಮಾಧಿಗಳ

;
ಹಂಪಿ - ಪುರಾತತ್ವ ಅದ್ಭುತ
HAMPI:  Like Rome, it is World's best open air museum with ruins of great Vijayanagara Empire

ರೋಮ್ ನಂತೆ ಇಡೀ ಹಂಪಿಯೇ ಒಂದು ಅದ್ಭುತ. ಇದನ್ನು ಜಗತ್ತಿನ ಅತಿದೊಡ್ಡ ಓಪನ್ ಏರ್ ಆರ್ಕಿಯಾಲಜಿಕಲ್ ಮ್ಯೂಸಿಯಂಗಳಲ್ಲಿ ಒಂದು ಎಂದು ಹೇಳಬಹುದು. ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾರಕಗಳು, ಜಗತ್ಪ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್ ನಿದರ್ಶನಗಳಿವೆ. ಅಲ್ಲದೆ, ಹಂಪಿಯ ಸುತ್ತ ಇರುವ ಬಂಡೆ ಬೆಟ್ಟಗಳ ಪರಿಸರ ಕರ್ನಾಟಕದ ವೈವಿಧ್ಯಮಯ ನಿಸರ್ಗ ಸೌಂದರ್ಯಕ್ಕೆ ಪ್ರತ್ಯೇಕ ಮೆರುಗನ್ನೇ ನೀಡಿದೆ. ಕರ್ನಾಟಕದಲ್ಲಿ ಹಂಪಿಯಂಥ ಹಲವಾರು ಶಿಲ್ಪಕಲೆಯ ಪುರಾತತ್ವ ಅದ್ಭುತಗಳಿವೆ. ಪ್ರತಿಯೊಂದೂ ತಾವೇ ತಾವಾಗಿ ಒಂದೊಂದು ಅದ್ಭುತ ಎನಿಸಿಕೊಳ್ಳಬೇಕಾದಂಥವು. ಬೇಲೂರು ಚನ್ನಕೇಶವ ದೇವಾಲಯ ಭಾರತೀಯ ಶಿಲ್ಪಕಲೆಯ ಔನ್ನತ್ಯಕ್ಕೆ ಉದಾಹರಣೆ. ಹಳೇಬೀಡು, ಪಟ್ಟದಕಲ್ಲು ದೇವಾಲಯಗಳು ಒಂದೆಡೆಯಾದರೆ ಐಹೊಳೆಯು ಭಾರತೀಯ ದೇವಾಲಯ ಶಿಲ್ಪಕಲೆಯ ತೊಟ್ಟಿಲು ಎಂದೇ ಖ್ಯಾತ. ಬಾದಾಮಿಯ ಗುಹಾಂತರ ದೇವಾಲಯಗಳೂ ಏನೂ ಕಡಿಮೆ ಇಲ್ಲ. ಲಕ್ಕುಂಡಿ, ತಲಕಾಡು ಸೇರಿದಂತೆ ಕರ್ನಾಟಕಾದ್ಯಂತ ಇರುವ ಇಂಥ ಹಲವಾರು ಪುರಾತತ್ವ ವೈಭವದ ಪ್ರಾತಿನಿಧಿಕ ಅದ್ಭುತವೇ ಹಂಪಿ.

ಹಂಪಿ: ವಿಜಯನಗರ ಸಾಮ್ರಾಜ್ಯದ ಆಳ್ವಿಕೆ ನೆನಪಿಸುವ ವಿಶ್ವದ ಅತ್ಯುತ್ತಮ ಬಯಲು ಸಂಗ್ರಹಾಲಯ

;
ಗೋಲ ಗುಮ್ಮಟ - ವಾಸ್ತು ವಿಜ್ಞಾನ ಅದ್ಭುತ
GOL GUMBUZ:  Black Tajmahal – the dome which hears a whisper and echoes 7 times

ಜಗತ್ತಿನ 7 ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಶ್ವೇತ ಸುಂದರಿಯಾದರೆ, ಕರ್ನಾಟಕದ ಗೋಲ ಗುಮ್ಮಟ ಕೃಷ್ಣ ಸುಂದರಿ. ಜಗತ್ತಿನ ಅತಿ ದೊಡ್ಡ ಗುಮ್ಮಟಗಳಲ್ಲಿ ಒಂದು ವಿಜಯಪುರದ ಗೋಲ ಗುಮ್ಮಟ. ಇಂಡೋ-ಸಾರ್ಸೆನಿಕ್ ಶೈಲಿಯ ಈ ಬೃಹತ್ ಸ್ಮಾರಕ ಆದಿಲ್ ಶಾಹಿ ರಾಜಮನೆತನದ ಮಹಾನ್ ಸಮಾಧಿಯಾದರೂ ಪುರಾತತ್ವ ವಾಸ್ತುಶಾಸ್ತ್ರ, ರೇಖಾಗಣಿತ ಮತ್ತು ಶಬ್ದವಿಜ್ಞಾನಕ್ಕೂ ಅತ್ಯುತ್ತಮ ಉದಾಹರಣೆ. ನಾಲ್ಕು ಗೋಡೆಗಳ ಮೇಲೆ, ನಡುವೆ ಯಾವುದೇ ಆಧಾರಗಳಿಲ್ಲದೆ ಬಹುದೊಡ್ಡ ಗುಮ್ಮಟವೊಂದನ್ನು ನಿರ್ಮಿಸಿರುವುದು ವಾಸ್ತುಶಾಸ್ತ್ರಜ್ಞರ ಅಪ್ರತಿಮ ಕೌಶಲ್ಯಕ್ಕೆ ಸಾಕ್ಷಿ. ಅದಕ್ಕಿಂತ ಈ ಗುಮ್ಮಟದ ಶಬ್ದಚಾತುರ್ಯ ಅಮೋಘವಾದುದು. ಗುಮ್ಮಟದ ಒಂದು ಬದಿಯಲ್ಲಿ ಪಿಸುಮಾತನ್ನಾಡಿದರೂ ಅಷ್ಟು ದೂರದ ಇನ್ನೊಂದು ತುದಿಯಲ್ಲಿ ಸ್ಪಷ್ಟವಾಗಿ ಕೇಳಿಸುತ್ತದೆ. ಗುಮ್ಮಟದಲ್ಲಿ ಒಂದು ಕೂಗು ಏಳು ಬಾರಿ ಮಾರ್ದನಿಸುತ್ತದೆ. ಈ ಶಬ್ದವೈಚಿತ್ರ್ಯವನ್ನು, ರೇಖಾಗಣಿತ ಆಧಾರಿತ ಕಟ್ಟಡ ವೈವಿಧ್ಯವನ್ನು ಪ್ರತಿನಿಧಿಸುವ ಕರ್ನಾಟಕದ ಅದ್ಭುತವೇ ಗೋಲ ಗುಮ್ಮಟ. ಅಷ್ಟೇ ಅಲ್ಲದೆ, ಕರ್ನಾಟಕದ ಅನೇಕ ಪ್ರಾಚೀನ ಹಾಗೂ ಆಧುನಿಕ ವಾಸ್ತು ವಿಜ್ಞಾನದ ಪ್ರಾತಿನಿಧಿಕವೂ ಹೌದು ಈ ಅದ್ಭುತ.

ಗೋಳಗುಮ್ಮಟ: ಪಿಸುಮಾತೂ 7 ಸಲ ಪ್ರತಿಧ್ವನಿಸುವ ವಿಶ್ವವಿಖ್ಯಾತ ಗೋಳಗುಮ್ಮಟ

;
ಶ್ರವಣಬೆಳಗೊಳದ ಗೊಮ್ಮಟೇಶ್ವರ - ತಾತ್ವಿಕ ಅದ್ಭುತ
Like The world Famous Christ statue of Rio-de-janeiro, it’s a gigantic Bahubali statue atop rock hill

ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ರಿಯೋ-ಡಿ-ಜನೈರೋದ ಕಿಸ್ತನ ಪ್ರತಿಮೆ ಹೇಗೋ, ನಮಗೆ ಕರ್ನಾಟಕದ ಶ್ರವಣಬೆಳಗೊಳದ ಗೊಮ್ಮಟೇಶ್ವರ ಪ್ರತಿಮೆ ಹಾಗೆ. ಇತ್ತೀಚೆಗೆ ರಾಜ್ಯದಲ್ಲಿ ಅತಿ ಎತ್ತರದ ಅನೇಕ ಏಕಶಿಲಾ ಪ್ರತಿಮೆಗಳು ರಚನೆಯಾಗುತ್ತಿದ್ದರೂ ಶ್ರವಣಬೆಳಗೊಳದ ಗೊಮ್ಮಟನ ನೂರಾರು ವರ್ಷದ ಇತಿಹಾಸಕ್ಕೆ ಅದ್ಯಾವುದೂ ಸಮವಾಗಲಾರದು. ಶ್ರವಣಬೆಳಗೊಳದ ಬಾಹುಬಲಿ - ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಆಯ್ಕೆಯಾಗಲು ಈ ಪ್ರತಿಮೆ ಜಗತ್ತಿನಾದ್ಯಂತ ಪ್ರಸಿದ್ಧ ಎನ್ನುವುದಷ್ಟೇ ಕಾರಣವಲ್ಲ. ಈ ಪ್ರತಿಮೆ ಕನ್ನಡನಾಡಿನ ಸಮರ-ಶಾಂತಿ ತತ್ವದ ಪ್ರಾತಿನಿಧಿಕ ಕುರುಹು. ಭರತ-ಬಾಹುಬಲಿಯ ಕಥೆಯನ್ನೊಮ್ಮೆ ಅವಲೋಕಿಸಿ. ನಾವು ಕನ್ನಡಿಗರೂ ಅಷ್ಟೇ ಸಮರಕ್ಕೂ ಸಿದ್ಧ, ಶಾಂತಿಗೂ ಬದ್ಧ. ನಮ್ಮ ಅಪಾರ ಶಕ್ತಿ ಸಾಮರ್ಥ್ಯ ಯಾರ ಮೇಲೋ ದಬ್ಬಾಳಿಕೆ ನಡೆಸಲು ಅಲ್ಲ. ಭರತನಂತೆ ಯಾರಾದರೂ ನಮ್ಮ ಮೇಲೆ ಹೋರಾಟಕ್ಕೆ ಇಳಿದಾಗ ಬಾಹುಬಲಿಯಾಗಿ ಅವರನ್ನು ಹೊಸಕಿ ಹಾಕುವುದು ನಮಗೆ ಕಷ್ಟವಲ್ಲ. ಆದರೂ ನಮ್ಮಷ್ಟಕ್ಕೆ ನಾವು ಗೊಮ್ಮಟನಂತೆ ಶಾಂತಿ ಪ್ರಿಯರು. ನಮ್ಮ ಈ "ಸಮರಕ್ಕೂ ಸಿದ್ಧ, ಶಾಂತಿಗೂ ಬದ್ಧ" ತತ್ವದ ಪ್ರಾತಿನಿಧಿಕ ಅದ್ಭುತವೇ ಶ್ರವಣಬೆಳಗೊಳದ ಗೊಮ್ಮಟೇಶ್ವರ. ಅಷ್ಟೇ ಅಲ್ಲ, ಜಗತ್ತಿಗೆ ಅನೇಕ ತತ್ವಾದರ್ಶಗಳನ್ನು ನೀಡಿದ ಕನಕ, ಪುರಂದರ, ಬಸವ, ಮಧ್ವ, ಶಿಶುನಾಳ ಶರೀಫ ಮುಂತಾದ ಎಲ್ಲ ಕನ್ನಡನಾಡಿನ ಮಹನೀಯರ ತಾತ್ವಿಕ ಪ್ರತಿನಿಧಿಯೂ ಹೌದು ಈ ಅದ್ಭುತ.

ಶ್ರವಣಬೆಳಗೊಳ ಗೊಮ್ಮಟೇಶ್ವರ : 1024 ವರ್ಷಗಳ ಹಿಂದೆ ನಿರ್ಮಿತವಾದ ಬೃಹತ್ ವಿಗ್ರಹ, ಜೈನ ಕಾಶಿ

;
ಮೈಸೂರು ಅರಮನೆ - ರಾಜಪರಂಪರಾ ಅದ್ಭುತ
MYSORE PALACE: One of the most beautiful palaces in India

ಭಾರತದ ಅತ್ಯಂತ ಸುಂದರ ಅರಮನೆಗಳಲ್ಲಿ ಒಂದು ಮೈಸೂರಿನ ಅರಮನೆ ಎಂದೇ ಖ್ಯಾತವಾದ ಮೈಸೂರಿನ ಅಂಬಾವಿಲಾಸ ಅರಮನೆ. ಕರ್ನಾಟಕದ ಗತವೈಭವವನ್ನು ಭವ್ಯವಾಗಿ ಬಿಂಬಿಸುವ ಈ ಅರಮನೆ ದೀಪಾಲಂಕಾರಗೊಂಡಾಗಲಂತೂ ಬಂಗಾರದ ಅರಮನೆಯಂತೆಯೇ ಭಾಸವಾಗುತ್ತದೆ. ತಾಜ್ ಮಹಲಿನಷ್ಟೇ ಪ್ರವಾಸಿಗರನ್ನು ಸೆಳೆಯುವ ಈ ಅರಮನೆ ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಪ್ರಮುಖ ಆಕರ್ಷಣೆಯೂ ಹೌದು. ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿ ಇದು ಆಯ್ಕೆಯಾಗಲು ಇಷ್ಟೇ ಕಾರಣವಲ್ಲ. ಸುಮಾರು 400 ವರ್ಷಗಳ ಇತಿಹಾಸ ಇರುವ ರಾಜಪರಂಪರೆಯ ಮೈಸೂರು ದಸರಾ ಹಬ್ಬ ಇಂದಿಗೂ ಸಜೀವ ಸಂಸ್ಕೃತಿಯಾಗಿ ವಿಜ್ರಂಭಣೆಯಿಂದ ಆಚರಣೆಯಾಗುತ್ತಿದೆ. ಅಲ್ಲದೆ, ಮೈಸೂರಿನ ಒಡೆಯರು, ಅಭಿವೃದ್ಧಿ, ಆಧುನಿಕತೆ, ಆಡಳಿತದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದರು. ಅಣೆಕಟ್ಟೆ, ನೀರಾವರಿ, ವಿದ್ಯುತ್, ಬೀದಿದೀಪ, ಚಿನ್ನದ ಗಣಿ, ರೈಲ್ವೆಯಂತಹ ಅನೇಕ ಪ್ರಗತಿಪರ ಕೈಂಕರ್ಯದಲ್ಲಿ ಅಗ್ರಗಣ್ಯರಾಗಿದ್ದ ಮೈಸೂರು ಅರಸರು ದೇಶದ ಸ್ವಾತಂತ್ರ್ಯಕ್ಕೂ ಮುನ್ನವೇ ಪ್ರಜಾಪ್ರತಿನಿಧಿ ಸಭೆಯನ್ನೂ ನಡೆಸಿ ದೇಶಕ್ಕೇ ಮಾದರಿಯಾಗಿದ್ದರು. ಕರ್ನಾಟಕದಲ್ಲಿ ವಿಜಯನಗರ ಅರಸರು, ಕದಂಬರು, ರಾಷ್ಟ್ರಕೂಟರು, ಹೊಯ್ಸಳರು, ಚಾಲುಕ್ಯರು... ಹೀಗೆ ಅನೇಕ ಹಿರಿ-ಕಿರಿಯ ಸಂಸ್ಥಾನಗಳ ಶ್ರೇಷ್ಠ ರಾಜಪರಂಪರೆಯಿದೆ. ಈ ಎಲ್ಲ ರಾಜ-ರಾಣಿಯರ ಕೊಡುಗೆ, ದಿಟ್ಟ, ಭವ್ಯ ಪರಂಪರೆಯ ಪ್ರಾತಿನಿಧಿಕ ಅದ್ಭುತವೇ ಮೈಸೂರು ಅರಮನೆ.

ಮೈಸೂರು ಅರಮನೆ: ಭಾರತದ ಅತಿ ಸುಂದರ ಅರಮನೆಗಳಲ್ಲೊಂದು

;
ಜೋಗ ಜಲಪಾತ - ನೈಸರ್ಗಿಕ ಅದ್ಭುತ - ನೆಲ
JOG FALLS: Largest and highest water falls in Karnataka

ಭಾರತದ ಅತ್ಯಂತ ಸುಂದರ ಹಾಗೂ ಬೃಹತ್ ಜಲಪಾತಗಳಲ್ಲಿ ಜೋಗ ಜಲಪಾತ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. 830 ಅಡಿ ಎತ್ತರದಿಂದ ಧುಮುಕುವ ಜೋಗ ಜಲಪಾತ ಮಳೆಗಾಲದಲ್ಲಂತೂ ನೀರಿನಿಂದ ತುಂಬಿ ರಾಜಗಾಂಭೀರ್ಯವನ್ನು ಪಡೆಯುತ್ತದೆ. ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುವ ಜೋಗ ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಪ್ರಮುಖ ಆಕರ್ಷಣೆಯಲ್ಲಿ ಒಂದು. ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿ ಇದು ಆಯ್ಕೆಯಾಗಲು ಇವಿಷ್ಟೇ ಕಾರಣವಲ್ಲ. ಜೀವವೈವಿಧ್ಯಗಳಿಂದ ಶ್ರೀಮಂತವಾಗಿರುವ ಪಶ್ಚಿಮ ಘಟ್ಟಗಳು ಭೂಮಿಯ ಅತಿ ಅಪರೂಪದ ಕಾಡುಗಳಲ್ಲಿ ಒಂದು. ಅಂತಹ ಅದ್ಭುತ ನಿಸರ್ಗದಲ್ಲಿರುವ ಜೋಗದ ಪರಿಸರಲ್ಲಿ ಕರ್ನಾಟಕದ ಅಪರೂಪದ ಸಸ್ಯ ಹಾಗೂ ಪ್ರಾಣಿಸಂಕುಲಗಳೂ ಇವೆ. ಶೋಲಾ ಕಾಡುಗಳಿಂದ ಹಿಡಿದು ದಟ್ಟ ನಿತ್ಯಹರಿದ್ವರ್ಣ ಕಾಡುಗಳವರೆಗೆ ಕರ್ನಾಟಕದಲ್ಲಿ 6 ವೈವಿಧ್ಯ ಕಾಡುಗಳಿವೆ. ನಾಗರಹೊಳೆ, ದಾಂಡೇಲಿಯಂಥ ಹುಲಿ ಸಂರಕ್ಷಿತ ಅಭಯಾರಣ್ಯಗಳಿವೆ.  ಕುದುರೆಮುಖ, ಕೊಡಗು, ಕೊಡಚಾದ್ರಿಯಂಥ ಹಸಿರು ಗಿರಿಧಾಮಗಳಿವೆ. ಶರಾವತಿಯಲ್ಲದೆ ಕಾವೇರಿ, ಕೃಷ್ಣೆ, ತುಂಗಭದ್ರಾದಂಥ ಅನೇಕ ಹಿರಿ-ಕಿರಿಯ ನದಿಗಳಿವೆ. ಹೆಬ್ಬೆ, ಗೋಕಾಕ್ ಫಾಲ್ಸ್, ಗಗನಚುಕ್ಕಿ, ಭರಚುಕ್ಕಿ, ಉಂಚಳ್ಳಿಯಂಥ ಹಲವಾರು ಸುಂದರ ಜಲಪಾತಗಳಿವೆ. ಈ ಎಲ್ಲ ಕರ್ನಾಟಕದ ನೆಲದ ಸೌಂದರ್ಯ ಮತ್ತು ಮಹತ್ವಗಳ ಪ್ರಾತಿನಿಧಿಕ ಅದ್ಭುತವೇ ಜೋಗ ಜಲಪಾತ.

ಜೋಗ ಜಲಪಾತ: ದೇಶವಿದೇಶಗಳಲ್ಲಿ ವಿಖ್ಯಾತವಾದ ಶಿವಮೊಗ್ಗ ಜಿಲ್ಲೆ ಜಲಪಾತ

;
ನೇತ್ರಾಣಿ ದ್ವೀಪ - ನೈಸರ್ಗಿಕ ಅದ್ಭುತ - ಜಲ
NETRANI HEART SHAPED ISLAND: The best Under-Sea scenery in Karnataka & 2nd best scuba diving spots in India

ಕರ್ನಾಟಕದ ಅದ್ಭುತಗಳೆಂದರೆ ಬರೀ ನೆಲದ ಮೇಲಿನ ಅದ್ಭುತಗಳಷ್ಟೇ ಅಲ್ಲ. ಕರ್ನಾಟಕದ ಅರಬ್ಬಿ ಸಮುದ್ರದ ಕಡಲಗರ್ಭವೂ ಕೂಡ ಅದ್ಭುತವೇ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬಳಿ ಇರುವ ನೇತ್ರಾಣಿ ದ್ವೀಪ ಪ್ರೀತಿಯ ಸಂಕೇತದಂತೆ ಹೃದಯಾಕಾರದಲ್ಲಿದೆ. ಈ ದ್ವೀಪದ ಸುತ್ತ ಇರುವ ಸಮುದ್ರ ಗರ್ಭ ಎಷ್ಟು ಅದ್ಭುತವಾಗಿದೆಯೆಂದರೆ, ಸ್ಕೂಬಾ ಡೈವಿಂಗ್ ಮಾಡಲು ಭಾರತದಲ್ಲಿ ನೇತ್ರಾಣಿ ದ್ವೀಪ ಎರಡನೇ ಅತ್ಯುತ್ತಮ ಪ್ರದೇಶ. ಒಂದನೇ ಅತ್ಯುತ್ತಮ ಪ್ರದೇಶ ಅಂಡಮಾನ್ ದ್ವೀಪ. ನೇತ್ರಾಣಿ ದ್ವೀಪದ ಕಡಲ ಗರ್ಭದಲ್ಲಿ ಆರೋಗ್ಯಕರ ಹವಳದ ಬಂಡೆಗಳಿವೆ. ಅಪರೂಪದ ಜಲಚರಗಳಿವೆ. ಸಾಗರ ಸಸ್ಯಗಳಿವೆ. ಇನ್ನೊಂದು ಗಮನೀಯ ವಿಚಾರ ಎಂದರೆ, ದೇಶದ ಎಲ್ಲ ರಾಜ್ಯಗಳಿಗೂ ಸಮುದ್ರ ಸೌಂದರ್ಯವಿಲ್ಲ. ಆದರೆ, ಕರ್ನಾಟಕದಲ್ಲಿ 310 ಕಿ.ಮೀ.ಯಷ್ಟು ಅದ್ಭುತ ಸಮುದ್ರ ಕಿನಾರೆಯಿದೆ. ನೇತ್ರಾಣಿ ಬಳಿ ಇರುವ ಮುರುಡೇಶ್ವರ ಈಗಾಗಲೇ ಕರ್ನಾಟಕದ ಪ್ರವಾಸೋದ್ಯಮದಲ್ಲಿ ಪ್ರಮುಖ ಸ್ಥಾನ ಪಡೆದಿದ್ದು ರಾಜ್ಯದ ಸಾಗರ ಪ್ರವಾಸೋದ್ಯಮಕ್ಕೆ ಇನ್ನಷ್ಟು ಹೇರಳ ಅವಕಾಶಗಳನ್ನು ಹೊಂದಿದೆ. ಇದರಿಂದ ಕರ್ನಾಟಕದ ಎಲ್ಲ ಸಮುದ್ರ ಕಿನಾರೆಗಳ ಪ್ರಾತಿನಿಧಿಕ ಅದ್ಭುತವೇ ನೇತ್ರಾಣಿ ದ್ವೀಪದ ಕಡಲಗರ್ಭ.

ನೇತ್ರಾಣಿ ಹೃದಯ ಆಕಾರದ ದ್ವೀಪ: ಕರ್ನಾಟಕದ ಅತಿ ಸುಂದರ ಸಾಗರದಾಳದ ದೃಶ್ಯಲೋಕ & ದೇಶದ 2ನೇ ಅತ್ಯುತ್ತಮ ಸ್ಕೂಬಾ ಡೈವಿಂಗ್ ತಾಣ

;

7 Wonders of Karnataka' Proclaimed in a Grand Glittering Ceremony

Chief Minister of Karnataka Basavaraj Bommai & Tourism Minister Anand Singh Make The Official Announcement

25th February 2023

This is the day to rejoice and celebrate the pride of Karnataka. Just as the world marvels at the beauty of the landmark Seven Wonders of the World, our land of Karnataka now boasts of its own Seven Wonders. The list is finally out! Chief Minister Basavaraj Bommai has announced the ‘Seven Wonders of Karnataka,’ which represent the best of the state’s land and water, forest and sea, faith and science, architecture and sculpture, and history and heritage. The Seven Wonders showcase only the very best that this state has to offer.

The declaration of the Seven Wonders was made by Chief Minister Basavaraj Bommai at a glittering event. In the ceremonial event, the chosen wonders were awarded a state certificate, which was received by the respective district commissioners.

The Seven Wonders of Karnataka are as follows:

  • 1. Hirebenakal Rock Tombs
  • 2. Hampi
  • 3. Gomateshwara
  • 4. Gol Gumbaz
  • 5. Mysore Palace
  • 6. Jog Falls
  • 7. Netrani Island

Addressing the gathering on this occasion, Chief Minister Basavaraj Bommai said that the ‘Seven Wonders of Karnataka’ has created a fresh tourism model for the state. I have already set in motion the preparation of a detailed development plan for Hirebenakal, which is a part of this stellar list of wonders. The District Commissioners of each of the seven wonders are asked to submit a blueprint development report to upgrade the facilities at these places.

The Seven Wonders of Karnataka were scooped out after a year of persistent effort and hard work.

He expressed appreciation for the meticulous process of nomination, whittling down and finally arriving at the Seven Wonders of Karnataka. He lauded the project team for sowing the seeds for a great initiative. He asked that the project not stop here but rather continue as an annual event. By doing this, said the CM, more precious and lesser-known places are likely to emerge. These are not just tourism locations but excellent opportunities to impart the true stories of our rich history, heritage and culture, said Mr. Bommai.

Karnataka state tourism minister Anand Singh said, “Since I have taken the state tourism office, a number of development programmes have been initiated in tourism hotspots. Still, there is much more to do. The project of the Seven Wonders of Karnataka should be eternally kept alive. But, the legislative assembly elections are upon us shortly. It is the nature of politics for parties to change and power to shift hands.

There should be a commitment to continue protecting and promoting important tourism centers. In this, public cooperation is most important. It doesn’t matter who is in power, the district commissioners and tourism department officials should undertake the responsibility unfailingly.”

He further added that our country itself is a wonder. Our state is an even more beautiful wonder. There is no doubt that these chosen seven wonders have all that it takes to attract the most curious travellers of the world. He is of the opinion that with the right media promotion, these places will stay intact in the hearts and minds of people.”

Ambassador of the Seven Wonders of Karnataka project, popular actor Ramesh Aravind said that Karnataka is blessed with hundreds of wonders. When I was approached to wear the hat of responsibility in choosing just seven out of these hundreds of wonders, I immediately accepted as it is a work of honour. Every year, different beautiful women from across the world wear the Miss World crown. But these wonderful places have been wearing the crown of beauty for years on end.

Our scriptures have the beautiful phrase of Satyam-Shivam-Sundaram, which literally translates to Truth-Godliness-Beauty. It means that the truth of existence, more than being good, is an experience of Godliness. Similarly, if an idea has to be eternally beautiful, it has to possess these qualities of truth, Godliness and essence.

The Seven Wonders of Karnataka are not just a visual treat. They also carry the essence of belonging, along with reflecting our culture, heritage and, above all, truth, he explained. We may have many differences in the form of language, caste, creed and the God we worship. These Seven Wonders bring together all of us with our various differences of nationality, language and beliefs to agree on the beauty of these wonders. The chosen Seven Wonders have an extra edge for the great potential that they carry. They attract visitors from all over the world to our state to first plan their visit to these seven wonders. These places serve as lessons of our stories and heritage to keen students of our culture. This is the first such brave attempt in the state, making an official entry into the Seven Wonders, he said.

Koppal district commissioner Sundaresh Babu, Vijayanagara district commissioner T Venkatesh, Hassan district commissioner M S Archana, Vijayapura district commissioner Mahantesh Danammanavar, Mysuru district commissioner Dr. T V Rajendra, Shivamogga district commissioner representative deputy officer Pallavi, and Uttara Kannada district commissioner Prabhulinga Kavalikatti received the certificates and official declaration for the winning Wonders of Karnataka.

There was also thematic dance performance by the Performing Arts Team of REVA Institutions to introduce and celebrate the 7 wonders of Karnataka.